ಸರ್ಕಾರ ರಚಿಸಿದ್ದ ತಜ್ಞರ ‌ಸಮಿತಿ ವಿನ್ಯಾಸಗೊಳಿಸಿರುವ ನಾಡಧ್ವಜ ಕುರಿತು ಕನ್ನಡ ಸಂಘಟನೆಗಳ ಮುಖಂಡರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಸಭೆ ನಡೆಸಿದರು. ಸರ್ಕಾರ ರೂಪಿಸಿರುವ ನಾಡಧ್ವಜಕ್ಕೆ ಕನ್ನಡ ಸಂಘಟನೆಗಳು, ಸಾಹಿತಿಗಳು, ಹೋರಾಟಗಾರರ ಸಮ್ಮತಿ ಸೂಚಿಸಿದರು.

ಸಭೆಯಲ್ಲಿ ಕರ್ನಾಟಕ ರಾಜ್ಯದ ಪ್ರತ್ಯೇಕ ನಾಡಧ್ವಜ ರಚನೆಗಾಗಿ ರಾಜ್ಯ ಸರ್ಕಾರ ರಚನೆ ಮಾಡಿದ್ದ ಕನ್ನಡ ಮತ್ತ ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಅಧ್ಯಕ್ಷತೆಯ 9 ಜನರ ಸಮಿತಿ ಸರ್ಕಾರಕ್ಕೆ ಸಲ್ಲಿಸಿದ್ದ ತ್ರಿವರ್ಣ ಧ್ವಜ ಮಾದರಿಯ ಧ್ವಜಕ್ಕೆ ಮನ್ನಣೆ ನೀಡಲು ನಿರ್ಧಾರ ಕೈಗೊಳ್ಳಲಾಯಿತು.

ಶೀಘ್ರವೇ ನಾಡಧ್ವಜದ ವಿನ್ಯಾಸ ಮತ್ತು ವಿವರವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿ ಒಪ್ಪಿಗೆ ಪಡೆಯಲಾಗುವುದು. ನಾಡಧ್ವಜ ಹೊಂದಲು ಸಂವಿಧಾನದಲ್ಲಿ ಅವಕಾಶ ಇದೆ.
–ಸಿದ್ದರಾಮಯ್ಯ, ಮುಖ್ಯಮಂತ್ರಿ

ಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಹಳದಿ, ಬಿಳಿ ಮತ್ತು ಕೆಂಪು ಬಣ್ಣದ ನಾಡಧ್ವಜವನ್ನು ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಅನಾವರಣಗೊಳಿಸಿದರು.

LEAVE A REPLY

Please enter your comment!
Please enter your name here