ಶೃಂಗೇರಿ ಶಾರದಾಪೀಠವು ೮ ನೇ ಶತಮಾನದಲ್ಲಿ ಅದ್ವೈತ ವೇದಾಂತದ ಪ್ರತಿಪಾದಕರಾದ ಶಂಕರಾಚಾರ್ಯರು ಸ್ಥಾಪಿಸಿದ ನಾಲ್ಕು ಪ್ರಮುಖ ಮಠಗಳಲ್ಲಿ ಮೊದಲನೆಯದು. ಆದಿ ಶಂಕರರು ಸ್ಥಾಪಿಸಿದ ೪ ಪೀಠಗಳಗಳ್ಲಿ ಇದನ್ನು ದಕ್ಷಿಣಾಮ್ನಾಯ ಪೀಠವೆನ್ನುತಾರೆ.

ಶೃಂಗೇರಿಯ ಮಠವು ಯಜುರ್ವೇದದ ಉಸ್ತುವಾರಿ ಹೊಂದಿದೆ. ನವರಾತ್ರಿಯ ಸಂದರ್ಭದಲ್ಲಿ ಶಾರದಾ ದೇವಿಗೆ ಚಂಡಿಕಾ ಹವನ, ರಥೋತ್ಸವ, ಕುಂಕುಮಾರ್ಚನೆ, ಚಿನ್ನರಥ ಸೇವೆ ಮುಂತಾದ ಸೇವೆಗಳು ನಡೆಯುತ್ತವೆ.

ಶೃಂಗೇರಿಯಲ್ಲಿ ಆದಿ ಶಂಕರಾಚಾರ್ಯರು ತಾಯಿ ಶಾರದೆಯನ್ನು ಪ್ರತಿಷ್ಠಾಪಿಸಿ ಮಠವನ್ನು ಸ್ಥಾಪಿಸಲು ಕಾರಣ ಈ ಕಥೆಯಲ್ಲಿದೆ. ಒಮ್ಮೆ ತುಂಗೆಯ ತಟಕ್ಕೆ ಶಂಕರಾಚಾರ್ಯರು ಬಂದಾಗ ಧಾರಾಕಾರವಾಗಿ ಮಳೆ ಸುರಿಯುತ್ತಿತ್ತಂತೆ. ಆ ಸಂದರ್ಭದಲ್ಲಿ ಹಾವೊಂದು ಹೆಡೆ ಬಿಚ್ಚಿ ಕಪ್ಪೆಯೊಂದಕ್ಕೆ ರಕ್ಷಣೆ ನೀಡುತ್ತಿತ್ತಂತೆ. ಶತ್ರುಗಳು ಮಿತ್ರರಾಗಿ ಸಹಕಾರಕ್ಕೆ ನಿಂತ ಈ ಸ್ಥಳದಲ್ಲಿ ಅಭೂತಪೂರ್ವವಾದ ಶಕ್ತಿ ಇದೆ ಎಂಬುದನ್ನು ಮನಗಂಡ ಆಚಾರ್ಯರು ಈ ಪ್ರದೇಶವನ್ನು ಪವಿತ್ರ ಪುಣ್ಯ ಕ್ಷೇತ್ರ ಮಾಡಿದರೆಂದು ಹೇಳಲಾಗುತ್ತದೆ.

ಈ ದೇವಸ್ಥಾನದಲ್ಲಿ ನವರಾತ್ರಿ ಮತ್ತು ವಿಶೇಷ ಚೈತ್ರ ಶುಕ್ಲ ಪೂರ್ಣಿಮಾ ಪೂಜೆ ಮುಂತಾದ ಹಬ್ಬಗಳನ್ನು ಆಚರಿಸಲಾಗುತ್ತದೆ. ಸ್ಥಳೀಯರು ದೀಪೋತ್ಸವವನ್ನು ಕಾರ್ತಿಕ ಪೂರ್ಣಿಮೆಯೆಂದು ಹಾಗು ಲಲಿತ ಪಂಚಮಿ ಯನ್ನು ಮಾಘ ಶುಕ್ಲ ಪಂಚಮಿ ಯಂದು ಮತ್ತು ಶ್ರೀ ಶಾರದಾಂಬ ರಥೋತ್ಸವವನ್ನು ಮಾಘ ತೃತೀಯ ದಂದು ಈ ಪುಣ್ಯಕ್ಷೇತ್ರದಲ್ಲಿ ಆಚರಿಸುತ್ತಾರೆ. ಇಲ್ಲಿರುವ ಶ್ರೀ ಶಕ್ತಿ ಗಣಪತಿ ದೇವಸ್ಥಾನವನ್ನು ಕೂಡ ನೋಡಬಹುದು. ಇದು ದೇವಾಲಯದ ದಕ್ಷಿಣ ದಿಕ್ಕಿನಲ್ಲಿದೆ.

LEAVE A REPLY

Please enter your comment!
Please enter your name here