ಹೌದು ಈ ಸಿಂಪಲ್ ವಿಧಾನದ ಮೂಲಕ ಪರಿಹಾರವನ್ನು ಕಂಡು ಕೊಳ್ಳಬಹುದು. ಯಾವಾಗಲೂ ತಲೆಕೂದಲನ್ನು ಸ್ವಚ್ಛವಾಗಿಡಿ. ಕೂದಲು ಸ್ವಚ್ಛವಾಗಿಟ್ಟರೆ ತಲೆಹೊಟ್ಟು, ತುರಿಕೆ ಕಡಿಮೆಯಾಗಿ ಕೂದಲುದುರುವುದೂ ಕೂಡಾ ಕಡಿಮೆಯಾಗುತ್ತದೆ.

ತಿಂಗಳಿಗೆ ಕನಿಷ್ಟ ಎರಡು ಬಾರಿಯಾದರೂ ಎಣ್ಣೆಯನ್ನು ಬಿಸಿ ಮಾಡಿ ತಲೆಬುಡಕ್ಕೆ ಹಚ್ಚಿ ಮಸಾಜ್ ಮಾಡಿ. ಇದಕ್ಕೆ ಆಲಿವ್ ಎಣ್ಣೆ, ತೆಂಗಿನೆಣ್ಣೆ ಅಥವಾ ಬಾದಾಮಿ ಎಣ್ಣೆ ಬಳಸಬಹುದು.

ತಲೆಯಲ್ಲಿ ಹೊಟ್ಟು ಏಳುತ್ತಿದ್ದರೆ ಮಸಾಜ್ ಮಾಡುವ ಎಣ್ಣೆಗೆ ಸ್ವಲ್ಪ ಕರ್ಪೂರದ ಚೂರುಗಳನ್ನು ಹಾಕಿ. ಇದು ಹೊಟ್ಟನ್ನು ಕಡಿಮೆ ಮಾಡುತ್ತದೆ.
ತಲೆಗೆ ಸ್ನಾನ ಮಾಡಿದ ನಂತರ ಒದ್ದೆ ಕೂದಲನ್ನು ಬಾಚಬೇಡಿ. ಆಗ ಕೂದಲು ಉದುರುವುದು ಹೆಚ್ಚು. ಕೂದಲು ಒಣಗಿಸಲು ಹೇರ್ ಡ್ರೈಯರ್ ಬಳಸಬೇಡಿ. ಇದರಿಂದ ಕೂದಲು ಉದುರುವುದು ಹೆಚ್ಚುತ್ತದೆ. ಸ್ನಾನ ಮಾಡಿದ ಮೇಲೆ ಸ್ವಚ್ಛ ಬಟ್ಟೆಯಲ್ಲಿ ತಲೆಕೂದಲನ್ನು ಕಟ್ಟಿ ಸ್ವಲ್ಪ ಹೊತ್ತಿನ ಮೇಲೆ ಅದನ್ನು ಬಿಚ್ಚಿ, ಸಹಜವಾಗಿಯೇ ಅದು ಒಣಗಲಿ.

ನೆಲ್ಲಿಕಾಯಿ, ಸೀಗೆಕಾಯಿ ಹಾಗೂ ಒಣಗಿದ ಕಹಿಬೇವಿನ ಎಲೆಯನ್ನು ಚೆನ್ನಾಗಿ ಅರೆದು ಪೇಸ್ಟ್ ಮಾಡಿ ತಲೆಗೆ ಹಚ್ಚಿ. ಒಂದು ಗಂಟೆ ಬಿಟ್ಟು ತಲೆ ತೊಳೆಯಿರಿ. ಬಾದಾಮಿ ಎಣ್ಣೆ, ಆಲಿವ್ ಎಣ್ಣೆ ಹಾಗೂ ಹರಳೆಣ್ಣೆಯನ್ನು ಸಮಪ್ರಮಾಣದಲ್ಲಿ ಮಿಕ್ಸ್ ಮಾಡಿ ಪ್ರತಿನಿತ್ಯ ಬಳಸಬಹುದು.

ತಿಂಗಳಿಗೊಮ್ಮೆಯಾದರೂ ಹೇರ್ ಪ್ಯಾಕ್ ಹಚ್ಚಿ. ಮೆಹೆಂದಿ ಸೊಪ್ಪು, ಮೊಸರು ಅಥವಾ ಮೊಟ್ಟೆ ಯಾವುದನ್ನೂ ಹೇರ್ ಪ್ಯಾಕ್ ಆಗಿ ಬಳಸಬಹುದು.
ಕೂದಲನ್ನು ಸ್ಟೈಲಿಶ್ ಆಗಿ ಕಾಣಿಸಲಿಕ್ಕಾಗಿ ಹೇರ್ ಜೆಲ್, ಕ್ರೀಂ, ಸ್ಪ್ರೇ ಅಥವಾ ಲೋಷನ್‌ಗಳನ್ನು ಬಳಸಬೇಡಿ. ಇಂಥ ತೆಂಗಿನೆಣ್ಣೆ ಅಥವಾ ಆಲಿವ್ ಎಣ್ಣೆಗೆ ಸ್ವಲ್ಪ ಮೆಂತ್ಯವನ್ನು ಹಾಕಿ ಕುದಿಸಿ. ನಂತರ ಸೋಸಿ ಬಾಟಲಿಯಲ್ಲಿ ಹಾಕಿಟ್ಟು ಪ್ರತಿನಿತ್ಯ ಬಳಸಿ.

LEAVE A REPLY

Please enter your comment!
Please enter your name here