ಕೃಷ್ಣ ಮೃಗ ಬೇಟೆಯಾಡಿ ಆರೋಪಿ ಸ್ಥಾನದಲ್ಲಿ ನಿಂತಿದ್ದ ಖ್ಯಾತ ಬಾಲಿವುಡ್ ನಟ ಸಲ್ಮಾನ್ ಖಾನ್ ದೋಷಿ ಎಂದು ತೀರ್ಪು ಪ್ರಕಟವಾಗಿದೆ. ಸಲ್ಮಾನ್ ಖಾನ್ ಗೆ ಒಟ್ಟು 5 ವರ್ಷ ಜೈಲು ಶಿಕ್ಷೆ ಖಚಿತವಾಗಿದೆ .!

ಈ ಮದ್ಯೆ ಸೋನಾಲಿ ಬೇಂದ್ರೆ ಹಾಗು ಸೈಫ್ ಅಲಿ ಖಾನ್ ಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ..

ಈ ಪ್ರಕರಣ ನಡೆದು ಬರೋಬ್ಬರಿ 20 ವರ್ಷಗಳೇ ಕಳೆದು ಹೋಗಿವೆ. 20 ವರ್ಷಗಳ ಹಿಂದೆ ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ಇತರೆ ನಟರ ವಿರುದ್ಧ ದಾಖಲಾಗಿದ್ದ ಕೃಷ್ಣಮೃಗ ಬೇಟೆ ಪ್ರಕರಣ ತೀರ್ಪನ್ನು ರಾಜಸ್ತಾನದ ಜೋಧ್ಪುರ ನ್ಯಾಯಾಲಯದ ಪ್ರಕಟಿಸಿದ್ದು, ಸಲ್ಮಾನ್ ಖಾನ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.

ಚಿತ್ರ ಚಿತ್ರೀಕರಣ ಒಂದಕ್ಕೆ ರಾಜಸ್ತಾನದಲ್ಲಿ ತಂಗಿದ್ದ ಸಲ್ಮಾನ್ ಖಾನ್ ಹಾಗೂ ಇತರೆ ಆರೋಪಿಗಳು 1998ರ ಅ.1 ಹಾಗೂ 2 ರ  ರಾತ್ರಿ ಜೋಧ್ಪುರ ಬಳಿಯ ಕಂಕಣಿ ಗ್ರಾಮದಲ್ಲಿ ಜಿಪ್ಸಿಯಲ್ಲಿ ಪ್ರಯಾಣಿಸುತ್ತಿದ್ದರು. ಆಗ ಅವರ ಕಣ್ಣಿಗೆ ಕೃಷ್ಣಮೃಗಗಳ ಹಿಂಡು ಕಾಣಿಸಿತ್ತು. ತಡ ನಂತರ ಕೃಷ್ಣ ಮೃಗಗಳನ್ನು ಬೇಟೆಯಾಡಿದ್ದರು ಎಂದು ಸುದ್ದಿಯಾಗಿತ್ತು.

LEAVE A REPLY

Please enter your comment!
Please enter your name here