ಅಮೃತಬಳ್ಳಿಯು ನಮ್ಮ ಮನೆಯಂಗಳದಲ್ಲಿ ಸುಲಭವಾಗಿ ಬೆಳೆಸಬಹುದಾದ ಔಷಧೀಯ ಬಳ್ಳಿ.ಇದರ ಕಾಂಡ, ಎಲೆ, ಬೇರು ಎಲ್ಲವೂ ಔಷಧೀಯ ಗುಣಗಳನ್ನು ಹೊಂದಿದೆ. ಅಮೃತ ಬಳ್ಳಿಯು ಕಹಿ, ಒಗರು ರಸಗಳನ್ನು ಒಳಗೊಂಡಿರುತ್ತದೆ.ಈ ಬಳ್ಳಿಯನ್ನು ಮನೆಯ ಎದುರು ಚಪ್ಪರದಂತೆ ಹಬ್ಬಿಸಬಹುದು.ಇದನ್ನು ಎಲ್ಲಾ ಪ್ರದೇಶದಲ್ಲಿ ಬೆಳೆಸಬಹುದು. ನೀರು ಮತ್ತು ಕೊಟ್ಟಿಗೆ ಗೊಬ್ಬರ ಅವಶ್ಯಕ.

ಎಲ್ಲಾ ಬಗೆಯ ಜ್ವರಗಳಲ್ಲಿಯೂ ಅಮೃತಬಳ್ಳಿಯು ಉತ್ತಮ ಔಷಧಿಯಾಗಿದೆ. ಮಧುಮೇಹ ರೋಗಕ್ಕೂ ಸಹ ಔಷಧಿಯಾಗಿ ಬಳಸುತ್ತಾರೆ. ಅದರ ಚಿಗರು ಕಾಂಡವನ್ನು ಜಜ್ಜಿ , ಹಿಸುಕಿ ರಸ ತೆಗೆದು 2 ಚಮಚೆ ರಸವನ್ನು ಜೇನು ತುಪ್ಪದೊಂದಿಗೆ ಬೆರೆಸಿ ದಿನಕ್ಕ್ಕೆ ಮೂರು ಬಾರಿ ಆಹಾರ ಸೇವನೆಯ ಮುಂಚೆ ಕುಡಿಯಬೇಕು.

ಅಮೃತಬಳ್ಳಿಯ ಚೂರನ್ನು ಅರ್ಧ ಟೀ ಚಮಚದಷ್ಟೇ ಒಂದೆರಡು ಮೆಣಸು ಕಾಳಿನ ಪುಡಿ ಸೇರಿಸಿಬೆಚ್ಚಗಿನ ನೀರಿನಲ್ಲಿ ಕಲಕಿ ದಿನಕ್ಕೆ ಎರಡು ವೇಳೆ ಸೇವಿಸುವುದರಿಂದ ಎದೆ ನೋವು ಕಡಿಮೆಯಾಗುತ್ತದೆ.ಬಾಣಂತಿಯರು ಅಮೃತಬಳ್ಳಿ ಹಾಗೂ ಶುಂಠಿಯಿಂದ ತಯಾರಿಸಿದ ಕಷಾಯವನ್ನು ಸೇವಿಸುವುದರಿಂದ ಸ್ತನ್ಯ(ಎದೆಹಾಲು) ಶುದ್ಧಿಯಾಗುವುದು.

 

ವಾಂತಿಯಾಗುತ್ತಿದ್ದರೆ 10 – 20 ಗ್ರಾಂ ಅಮತ ಬಳ್ಳಿ ಕಷಾಯದ ಜತೆ 2 ಚಮಚ ಜೇನುತುಪ್ಪವನ್ನು ಸೇರಿಸಿ ಸೇವಿಸಿ ವಾಂತಿಯಾಗುವುದು ಕೆಡಿಮೆ ಯಾಗುತ್ತದೆ.ಅಮೃತ ಬಳ್ಳಿ ಹಾಗೂ ತ್ರಿಫಲಾ ಪುಡಿ ಸೇರಿಸಿ ಕಷಾಯ ತಯಾರಿಸಿ. ಅದಕ್ಕೆ ಜೇನುತುಪ್ಪ ಬೆರೆಸಿ ನಿಯಮಿತವಾಗಿ ಸೇವಿಸಿದರೆ ಕಣ್ಣಿನ ದಷ್ಠಿ ಹೆಚ್ಚುತ್ತದೆ.

ಅಮೃತ ಬಳ್ಳಿ ಪುಡಿಗೆ ಶುಂಠಿ ಪುಡಿ ಮತ್ತು ಹಾಲು ಸೇರಿಸಿ ಸೇವಿಸಿದರೆ ಬಿಕ್ಕಳಿಕೆ ನಿಲ್ಲುತ್ತದೆ.ಅಮೃತಬಳ್ಳಿ, ನೆಗ್ಗಿಲು, ಅಶ್ವಗಂಧ, ನೆಲ್ಲಿ, ಶುಂಠಿಗಳನ್ನು ಸಮಪ್ರಮಾಣದಲ್ಲಿ ನಯವಾಗಿ ಪುಡಿಯನ್ನು 10ಗ್ರಾಂನಷ್ಟು ಶುದ್ಧ ನೀರು ಹಾಕಿ ಕಷಾಯ ಮಾಡಿ ಒಂದು ಭಾರಿಗೆ ಒಂದು ಟೀ ಚಮಚದಷ್ಟು ಕುಡಿಯುದರಿಂದ ಮುತ್ರಕೋಶದಲ್ಲಿರುವ ಕಲ್ಲುಗಳು ಕ್ರಮೇಣವಾಗಿ ಕರಗುತ್ತದೆ.

ಅಮೃತಬಳ್ಳಿಯ ಹಸಿಸೊಪ್ಪಿನ ರಸವನ್ನು 2 ಟೀ ಚಮಚದಷ್ಟು ಸ್ವಲ್ಪ ಓಂಪುಡಿ ಸೇರಿಸಿ ಮಜ್ಜಿಗೆಯಲ್ಲಿ ಕದಡಿ ಕುಡಿಯುವುದರಿಂದ ಹೊಟ್ಟೆ ಉರಿಯು ಕಡಿಮೆಯಾಗುತ್ತದೆ.ಬೊಜ್ಜು ಮತ್ತು ಕೊಬ್ಬು ಕಡಿಮೆ ಆಗಲು ಇದು ಪರಿಣಾಮಕಾರಿ ಔಷಧಿ. ಅಮೃತಬಳ್ಳಿ, ನೆಗ್ಗಿಲು, ಅಶ್ವಗಂಧ, ನೆಲ್ಲಿ, ಶುಂಠಿಗಳನ್ನು ಸಮಪ್ರಮಾಣದಲ್ಲಿ ನಯವಾಗಿ ಪುಡಿಯನ್ನು 10ಗ್ರಾಂನಷ್ಟು ಶುದ್ಧ ನೀರು ಹಾಕಿ ಮಾಡಿದ ಕಷಾಯಕ್ಕೆ ಒಂದು ಗುಲಗಂಜಿಯಷ್ಟು ಲೋಹ ಭಸ್ಮವನ್ನು ಮತ್ತು ಟೀ ಚಮಚ ಜೇನು ತುಪ್ಪವನ್ನು ಕೂಡಿಸಿ ಸೇವಿಸುವುದು.

ಸುಮಾರು 40 ದಿನ ಇದನ್ನು ಸೇವಿಸಬೇಕು.ಎಲ್ಲಾ ಬಗೆಯ ಜ್ವರಗಳಲ್ಲಿಯೂ ಅಮೃತಬಳ್ಳಿಯು ಉತ್ತಮ ಔಷಧಿಯಾಗಿ ಕೆಲಸ ಮಾಡುತ್ತದೆ ಮಧುಮೇಹ ರೋಗಕ್ಕೆ ಔಷಧಿಯಾಗಿ ಬಳಸುತ್ತಾರೆ ಅದರ ತಜಾ ಕಾಂಡವನ್ನು ಜಜ್ಜಿ , ಹಿಸುಕಿ ರಸ ತೆಗೆದು ಚಮಚ ರಸವನ್ನು ಜೇನು ತುಪ್ಪದೊಂದಿಗೆ ಬೆರೆಸಿ ದಿನಕ್ಕೆ ಬಾರಿ ಆಹಾರ ಸೇವನೆಯ ಮುಂಚೆ ಕುಡಿಯ ಬೇಕು.

ಅಮೃತಬಳ್ಳಿಯ ಚೂರ್ಣ ಅರ್ಧ ಟೀ ಚಮಚದಷ್ಟೇ ಒಂದೆರಡು ಮೆಣಸು ಕಾಳಿನ ಪುಡಿ ಸೇರಿಸಿ ಬಿಸಿ ನೀರಿನಲ್ಲಿ ಕದಡಿ ದಿವಸಕ್ಕೆ ಎರಡು ವೇಳೆ ಸೇವಿಸುವುದು.ಶತಾವರಿ ಶುಂಠಿ ವಾಯುವಿಳಂಗ ಬಜೆ, ಬ್ರಾಹ್ಮಿ ಅಳಲೆಕಾಯಿ ಉತ್ತರಾಣೆ ಮತ್ತು ಸಮಭಾಗ ಅಮೃತಬಳ್ಳಿ ಸೇರಿಸಿ ನಯವಾದ ಚೂರ್ಣ ಮಾಡಿಟ್ಟುಕೊಳ್ಳುವುದು.

ಅರ್ಧ ಟೀ ಚಮಚ ಚೂರ್ಣಕ್ಕೆ ಸ್ವಲ್ಪ ತುಪ್ಪ ಸೇರಿಸಿ ನೆಕ್ಕುವುದು. ಮೇಲೆ ಕೆಂಪು ಕಲ್ಲುಸಕ್ಕರೆ ಹಾಕಿರುವ ಬಿಸಿ ಹಾಲನ್ನು ಕುಡಿಯುವುದು. ದೂರವಾಣಿ ಸಂಖ್ಯೆಗಳನ್ನಾಗಲಿ ಅಥವಾ 15ರಿಂದ 19 ತನಕ ಮಗ್ಗಿಯನ್ನು ನೆನಪಿನಲ್ಲಿ ಉಳಿಸಿಕೊಳ್ಳಲು ಪ್ರಯತ್ನಿಸುವುದು ಕೆಲವೇ ತಿಂಗಳಲ್ಲಿ ಫಲ ದೊರೆಯುವುದು.ಸುಮಾರು 25 ಗ್ರಾಂನಷ್ಟು ಅಮೃತಬಳ್ಳಿಯನ್ನು ಅರೆದು ಶುದ್ಧವಾದ ನೀರು ಹಾಕಿ ಕಾಯಿಸಿ ಕಷಾಯ ಮಾಡಿಟ್ಟುಕೊಳ್ಳುವುದು.

ದಿನಕ್ಕೆ ಮೂರು ವೇಳೆ ಸ್ವಲ್ಪ ಜೇನುತುಪ್ಪ ಸೇರಿಸಿ ಕುಡಿಯುವುದು.ಅಮೃತಬಳ್ಳಿ, ನೆಗ್ಗಿಲು, ಅಶ್ವಗಂಧ, ನೆಲ್ಲಿ, ಶುಂಠಿಯ ಸಮತೂಕ ನಯವಾಗಿ ಚೂರ್ಣ ಮಾಡಿಟ್ಟುಕೊಳ್ಳುವುದು. 10ಗ್ರಾಂನಷ್ಟು ಚೂರ್ಣವನ್ನು ಶುದ್ಧ ನೀರು ಹಾಕಿ ಕಷಾಯ ಮಾಡಿ ವೇಳೆಗೆ ಒಂದು ಟೀ ಚಮಚದಷ್ಟು ಕುಡಿಸುವುದು.ಅಮೃತಬಳ್ಳಿಯ ಎಲೆ ಸಾಸಿವೆ ಶ್ರೀಗಂಧದ ಚಕ್ಕೆ ಇವುಗಳ ಸಮತೂಕವನ್ನು ಎಮ್ಮೆಯ ಹಾಲಿನಲ್ಲಿ ಅರೆದು ಮೈಗೆ ಹಚ್ಚುವುದು.

ಪಿತ್ತ ವಿಕಾರ ಕಡಿಮೆ ಆಗಿ ಪಿತ್ತದ ಗಂಧೆಗಳು ಮತ್ತು ನೆವೆ ಉರಿ ಶಮನವಾಗುವುದು.ಹಸಿಸೊಪ್ಪಿನ ರಸ 2 ಟೀ ಚಮಚದಷ್ಟು ಸ್ವಲ್ಪ ಓಂಪುಡಿ ಸೇರಿಸಿ ಮಜ್ಜಿಗೆಯಲ್ಲಿ ಕದಡಿ ಕುಡಿಯುವುದು.ಅಮೃತಬಳ್ಳಿ ತ್ರಫಲ ಚೂರ್ಣ,ತುಂಗೇಗುಡ್ಡೆ ಕೊತ್ತಂಬರಿ, ಶತಾವರಿ, ಕಳ್ಳಂಗಡಲೆ ಮತ್ತು ಬೇಲದ ಬೇರು ಇವುಗಳ ಸಮತೂಕದಷ್ಟನ್ನು ಚೆನ್ನಾಗಿ ಒಣಗಿಸಿ ಪುಡಿ ಮಾಡಿಟ್ಟುಕೊಳ್ಳುವುದು.

ಸ್ವಲ್ಪ ಚೂರ್ಣಕ್ಕೆ ಎರಡು ಬಟ್ಟಲು ನೀರು ಹಾಕಿ ಕಾಯಿಸಿ ಅರ್ಧ ಬಟ್ಟಲು ಕಷಾಯವನ್ನು ಮಾಡಿ ಆರಿಸಿ ಕುಡಿಯುವುದು.ಹಸಿ ಅಮೃತಬಳ್ಳಿಯನ್ನು ತಂದು ತಣ್ಣನೆಯ ಹಾಲಿನಲ್ಲಿ ನುಣ್ಣನೆ ರುಬ್ಬಿ ತಲೆಗೆ ಪಟ್ಟು ಹಾಕುವುದು. ಒಂದೆರಡು ತಾಸುಗಳ ನಂತರ ಬಿಸಿ ನೀರಿನಿಂದ ಸ್ನಾನ ಮಾಡುವುದು.ಅಮೃತಬಳ್ಳಿ ತ್ರಿಫಲ ಚೂರ್ಣ,ಹಿಪ್ಪಲಿ ಸಮ ಪ್ರಮಾಣ ಸೇರಿಸಿ ಜಜ್ಜಿ ಕಷಾಯ ಮಾಡುವುದು. ಅರ್ಧ ಬಟ್ಟಲು ಕಷಾಯಕ್ಕೆ ಜೇನುತುಪ್ಪ ಸೇರಿಸಿ ಕುಡಿಯುವುದು.

 

LEAVE A REPLY

Please enter your comment!
Please enter your name here